ಕರ್ನಾಟಕ -ಕೇರಳ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ…
ಬೆಂಗಳೂರು:ಕರ್ನಾಟಕ ಕೇರಳ ರಾಜ್ಯದ ಗುಂಡ್ಲುಪೇಟೆಯಿಂದ ವಯನಾಡ್ ಜಿಲ್ಲೆಗೆ ರಾತ್ರಿ ಅರಣ್ಯದಲ್ಲಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಕೇರಳದ ವಯಾನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಶಾಸಕ ಐ ಸಿ ಬಾಲಕೃಷ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್, ಚಾಮರಾಜ ನಗರ ಜಿಲ್ಲೆಯ ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಗುಂಡ್ಲಪೇಟೆ ಶಾಸಕ ಹೆಚ್ ಎಂ ಗಣೇಶ್ ಪ್ರಸಾದ, ಕೆ ಆರ್ ನಗರ ಶಾಸಕ ರವಿಶಂಕರ ಮೊದಲಾದವರು ಚರ್ಚಿಸಿ ತೆರವುಗೊಳಿಸಲು ವಿನಂತಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ ಎಸ್ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಹೆಚ್ ಎಂ ರೇವಣ್ಣ, ಸಚಿವ ಭೈರತಿ ಸುರೇಶ ಮೊದಲಾದವರು ಉಪಸ್ಥಿತರಿದ್ದರು. ಸಂಬಂಧಪಟ್ಟ ಅಧಿಕಾರಿಗಳ ತುರ್ತು ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.