ಸಿದ್ಧಕಟ್ಟೆ : ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಹೊಸ ಪ್ರಯೋಗ…

ಸಬ್ ಜ್ಯೂನಿಯರ್ ( ಮರಿ ಕೋಣ) ಹಗ್ಗ ಮತ್ತು ನೇಗಿಲು ವಿಭಾಗದ 'ರೋಟರಿ ಕಂಬಳ ಕೂಟ' ಕ್ಕೆ ಚಾಲನೆ...

ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಬಂಟ್ವಾಳ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ‘ರೋಟರಿ ಕಂಬಳ ಕೂಟ’  ಆಯೋಜಿಸುವ ಮೂಲಕ ದೇಶ – ವಿದೇಶಗಳಲ್ಲಿ  ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೋಟರಿ ಕ್ಲಬ್ ಮತ್ತಿತರ ಸಂಘಟನೆ ಗಳಿಗೆ ಹೊಸ ದಿಕ್ಕು ತೋರಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಹೇಳಿದರು.
ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ ವಿಕ್ರಮ ಜೋಡುಕರೆ ಯಲ್ಲಿ ಬಂಟ್ವಾಳ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ‘ರೋಟರಿ ಕ್ಲಬ್ ಕಂಬಳ ಕೂಟ’ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್ಬಿನ ಮಾಜಿ ಅಧ್ಯಕ್ಷ, ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಳದ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್ ಕಂಬಳ ಕರೆ ಉದ್ಘಾಟಿಸಿದರು.
ಹಿರಿಯ ವೈದ್ಯ ಡಾ.ಪ್ರಭಾಚಂದ್ರ ಜೈನ್, ರೋಟರಿ ಮಾಜಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ ಕಾರಂತ್, ನಿಯೋಜಿತ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗಾ, ಸಹಾಯಕ ಗವರ್ನರ್ ಡಾ.ಮುರಳಿಕೃಷ್ಣ, ಸಹಾಯಕ ಗವರ್ನರ್ ಮಹಮ್ಮದ್ ವಳವೂರು, ಮೂಡುಬಿದ್ರೆ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಡಾ.ಸುದೀಪ್ ಕುಮಾರ್ ಜೈನ್, ಶಿವಮೊಗ್ಗ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಸ್ಯಾಂಕ್ಟಿಸ್
ಶುಭ ಹಾರೈಸಿದರು.
ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಪೊಡುಂಬ ಸಂದೀಪ್ ಶೆಟ್ಟಿ, ಕಾರ್ಯದರ್ಶಿ ಶಶಿಧರ ಶೆಟ್ಟಿ ಕಲ್ಲಾಪು, ವಲಯ ಸೇನಾನಿ ಗಣೇಶ ಶೆಟ್ಟಿ ಸಿದ್ಧಕಟ್ಟೆ, ಮಾಜಿ ವಲಯ ಸೇನಾನಿ ಶ್ರುತಿ ಅರುಣ್ ಮಾಡ್ತ, ಕ್ಲಬ್ಬಿನ ಉಪಾಧ್ಯಕ್ಷ ವಿಜಯ ಫೆರ್ನಾಂಡಿಸ್, ಕಾರ್ಯದರ್ಶಿ ರಾಜೇಶ ಶೆಟ್ಟಿ ಸೀತಾಳ ರಾಯಿ, ಕೋಶಾಧಿಕಾರಿ ಹೆರಾಲ್ಡ್ ಮೊಂತೆರೋ, ಹಿರಿಯ ತೀರ್ಪುಗಾರರಾದ ಎಡ್ತೂರು ರಾಜೀವ ಶೆಟ್ಟಿ, ವಿಜಯ ಕುಮಾರ್ ಕಂಗಿನಮನೆ, ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ,
ಸಿದ್ಧಕಟ್ಟೆ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಮೈಕೆಲ್ ಡಿಕೋಸ್ತ, ಸ್ಥಳದಾನಿ ಓಬಯ ಪೂಜಾರಿ, ಕೊರಗಪ್ಪ ಪೂಜಾರಿ, ಜನಾರ್ದನ ಬಂಗೇರ, ಪ್ರಮುಖರಾದ ಆಂಟನಿ ಸಿಕ್ವೇರ ಬಂಟ್ವಾಳ,  ಹರೀಶ ಶೆಟ್ಟಿ ಬೈಪಾಸ್,  ಬಾವ ಹೊಸಮನೆ ಸುಧಾಕರ ಚೌಟ,  ಸೆಬೆಸ್ಟಿನ್ ಮಿನೇಜಸ್, ಆಲ್ವಿನ್ ಮಿನೇಜಸ್, ಸದಾನಂದ ಶೆಟ್ಟಿ ಪಂಜಿಕಲ್ಲು, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ ಶೆಟ್ಟಿ ಕೊನೆರೊಟ್ಟು ಮತ್ತಿತರರು ಇದ್ದರು.
ಕ್ಲಬ್ಬಿನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಸ್ವಾಗತಿಸಿ, ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ವಂದಿಸಿದರು.
ಕ್ಲಬ್ಬಿನ ಸದಸ್ಯ ನೆಲ್ಸನ್ ಮೋನಿಸ್ ಮತ್ತು ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.
ವಿಶೇಷತೆ:
ಕಂಬಳದಲ್ಲಿ ಭಾಗವಹಿಸಿದ ಎಲ್ಲರಿಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಸಬ್ ಜ್ಯೂನಿಯರ್ ನೇಗಿಲು ವಿಭಾಗದಲ್ಲಿ 79 ಜೊತೆ ಮತ್ತು ಹಗ್ಗ ವಿಭಾಗದಲ್ಲಿ 6 ಜೊತೆ ಸೇರಿದಂತೆ ಒಟ್ಟು 85 ಜೋಡಿ ಮರಿ ಕೋಣಗಳು ಪಾಲ್ಗೊಂಡು ಗಮನ ಸೆಳೆಯಿತು.

whatsapp image 2024 10 19 at 4.52.20 pm (1)

whatsapp image 2024 10 19 at 4.52.20 pm

Sponsors

Related Articles

Back to top button