ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಅಂತರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಫುಲ್ ಯು ಎಸ್ ಆಯ್ಕೆ…

ಪುತ್ತೂರು : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು CIT ಗುಬ್ಬಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ಅಕ್ಟೋಬರ್ 30 ರಿಂದ ಚೆನ್ನೈನ ಎಸ್‍ಆರ್ ಎಂ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಕುಕ್ಕೆ ಸುಬ್ರಮಣ್ಯ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿಯಾಗಿದ್ದ ದಿ.ಯು ಡಿ ಶೇಖರ್ ಮತ್ತು ಉಪ್ಪಿನಂಗಡಿ ಗ್ರಾ. ಪಂ. ಕಾರ್ಯದರ್ಶಿ ಶ್ರೀಮತಿ ಗೀತಾ ಶೇಖರ್ ದಂಪತಿಯ ಪುತ್ರರಾಗಿರುವ ಪ್ರಫುಲ್ ಯು ಎಸ್
ಸತತ ಮೂರನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Related Articles

Back to top button