ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ…

ಬಂಟ್ವಾಳ: ನ.5 :ಶಿಕ್ಷಣ ಪೌಂಡೇಶನ್ ಸಂಸ್ಥೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಒಂದು ದಿನದ ಡಿಜಿಟಲ್ ಸಾಕ್ಷರತೆ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ ತರಬೇತಿಯನ್ನು ಬಂಟ್ವಾಳ ತಾಲೂಕು ಪಂಚಾಯತ್ ನ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆಯ ಅಗತ್ಯತೆಯ ಬಗ್ಗೆ ಹಾಗೂ ತರಬೇತಿಯಿಂದಾಗುವ ಸಕಾರತ್ಮಕ ಪರಿಣಾಮಗಳ ಬಗ್ಗೆ ತಿಳಿಸಿದರು. ಶಿಕ್ಷಣ ಪೌಂಡೇಶನ್ ವತಿಯಿಂದ ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಿಗೆ ಅನೇಕ ರೀತಿಯ ಡಿಜಿಟಲ್ ಸಾಧನಗಳನ್ನು ಒದಗಿಸಿದ್ದು, ಅವುಗಳ ಸಹಾಯದಿಂದ ಗ್ರಾಮೀಣ ಭಾಗದ ಸಮುದಾಯದ ಜನರು ಡಿಜಿಟಲ್ ಸಾಕ್ಷರರಾಗಬೇಕು, ಇದರ ಮೂಲಕ ತಮ್ಮ ದೈನಂದಿನ ಉದ್ಯೋಗ, ವ್ಯವಹಾರಗಳಲ್ಲಿ, ಸದೃಢರಾಗಬೇಕು ಎಂಬ ಕಿವಿಮಾತು ತಿಳಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಣ ಫೌಂಡೇಶನ್ ಜಿಲ್ಲಾ ಸಂಯೋಜಕರಾದ ಸುಮತಿ ರವರು ನಿರ್ವಹಿಸಿದರು. ಪುಣಚ ಗ್ರಾಮ ಪಂಚಾಯತ್ ಅರಿವು ಕೇಂದ್ರ ಮೇಲ್ವಿಚಾರಕರಾದ ಜಯಲಕ್ಷ್ಮಿ ಇವರು ಸ್ವಾಗತಿಸಿದರು.
ಶಿಕ್ಷಣ ಫೌಂಡೇಶನ್ ಉಡುಪಿ ಜಿಲ್ಲಾ ಸಂಯೋಜಕರಾದ ರೀನಾ ಹೆಗಡೆಯವರು ಡಿಜಿಟಲ್ ಸಾಕ್ಷರತೆ ಮತ್ತು ನಾಯಕತ್ವ ತರಬೇತಿಯನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಕಾಶ್, ಗ್ರಂಥಾಲಯ ಮೇಲ್ವಿಚಾರಕರ ವಿಷಯ ನಿರ್ವಾಹರಾಗಿರುವ ಅಶೋಕ್ ಕುಮಾರ್, ಶಿಕ್ಷಣ ಫೌಂಡೇಶನ್ ಜಿಲ್ಲಾ ಸಂಯೋಜಕರಾದ ಲವೀಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
53 ಅರಿವು ಕೇಂದ್ರಗಳ ಮೇಲ್ವಿಚಾರಕರು ಈ ತರಬೇತಿಯ ಸದುಪಯೋಗ ಪಡೆದುಕೊಂಡರು.
ಕೇಪು ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಮೇಲ್ವಿಚಾರಕರಾದ ಭವ್ಯ ಕುಮಾರಿ ವಂದಿಸಿದರು.

whatsapp image 2024 11 07 at 10.53.06 pm

Sponsors

Related Articles

Back to top button