ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು -ಎಂಬಿಎ ಮತ್ತು ಎಂಸಿಎ ವಿಭಾಗದಲ್ಲಿ ಶೇ.100 ಫಲಿತಾಂಶ…

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024ನೇ ಸಾಲಿನ ಅಂತಿಮ ವರ್ಷದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಎರಡೂ ವಿಭಾಗಗಳಲ್ಲಿ 100% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಇದೇ ಆಗಸ್ಟ್ ತಿಂಗಳಿನಲ್ಲಿ ನಡೆದ ಎಂಸಿಎ ವಿಭಾಗದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 60 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ 60 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಅಪೂರ್ವ ಸಾಧನೆಯನ್ನು ಮಾಡಿದ್ದಾರೆ.
ಅಕ್ಟೋಬರ್ ತಿಂಗಳಿನಲ್ಲಿ ಪೂರ್ಣಗೊಂಡ ಎಂಬಿಎ ವಿಭಾಗದ ಪರೀಕ್ಷೆಗೆ 59 ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ 54 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಹೆಚ್ಚಿನ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ಉತ್ತಮ ಸಂಬಳದೊಂದಿಗೆ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.
ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button