ನ. 28 – ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವು ನ. 28 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ನ. 28 ಗುರುವಾರ ಬೆಳಿಗ್ಗೆ 9.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್‍ನ ಅಧ್ಯಕ್ಷ ಸತೀಶ ರೈ ಕಟ್ಟಾವು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಎರಡು ವಾಲಿಬಾಲ್ ಅಂಕಣದಲ್ಲಿ ಈ ಸ್ಪರ್ಧೆಗಳು ನಡೆಯಲಿದ್ದು, ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 18 ತಂಡಗಳು ಇದರಲ್ಲಿ ಭಾಗವಹಿಸುತ್ತವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

vtu zonal volleyaball 2024

Related Articles

Back to top button