ಸಂಪಾಜೆ ಗ್ರಾಮ ಪಂಚಾಯತ್-ಸಂವಿಧಾನ ದಿನ ಆಚರಣೆ…
ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಸಂವಿಧಾನವನ್ನು ಅಂಗೀಕರಿಸಿದ 75 ನೇ ವರ್ಷವನ್ನು ಸಂವಿಧಾನದ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ, ಉಪಾಧ್ಯಕ್ಷರಾದ ಎಸ್. ಕೆ ಹನೀಫ್ ಪಂಚಾಯತ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಅಬೂಬಕ್ಕರ್.ಎಂ. ಸಿ., ಗ್ರಂಥಾಲಯ ಮೇಲ್ವಿಚಾರಕಿ ನಸೀಮಾ, ಸವೇರಪುರ ಪ್ರೌಡ ಶಾಲೆ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು. ನಸೀಮಾ ಸಂವಿದಾನ ಪೀಠಿಕೆ ಓದಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಕಾರ್ಯಕ್ರಮದ ಬಗ್ಗೆ ವಿವರಿಸಿದರು.






