ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್: ಮೂರು ದಿನಗಳ ತಾಂತ್ರಿಕ ಉತ್ಸವ AURA 2K24…
ಪುತ್ತೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತಿವೆ. ಈ ಕ್ಷಿಪ್ರ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಪಠ್ಯಕ್ರಮದ ಜತೆಯಲ್ಲಿ ಅನೇಕ ಪೂರಕ ವಿಷಯಗಳನ್ನು ಕಲಿತುಕೊಳ್ಳುವುದು ತುಂಬಾ ಅವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕಿ ವಿದ್ಯಾ.ಆರ್.ಗೌರಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಡಾಟಾ ಸೈನ್ಸ್ ವಿಭಾಗದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ತಾಂತ್ರಿಕ ಉತ್ಸವ ಔರ-2ಕೆ24 (AURA -2K24 ) ಇದರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸಮಾಜದ ಆವಶ್ಯಕತೆಗಳನ್ನು ಅರಿತುಕೊಂಡು ಕಟ್ಟದ ಕಡೆಯ ವ್ಯಕ್ತಿಗೂ ಉಪಕಾರವಾಗುವ ರೀತಿಯಲ್ಲಿ ವಿದ್ಯಾರ್ಥಿಗಳು ಹೊಸತನ್ನು ಸಾಧಿಸಬೇಕು ಎಂದವರು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಆವಶ್ಯಕತೆಗೆ ಅನುಗುಣವಾಗಿ ಕಾಲೇಜು ಇಂತಹ ಅನೇಕ ಚಟುವಟಿಕೆಗಳನ್ನು ಸಂಘಟಿಸುತ್ತದೆ ಇದರಲ್ಲಿ ಭಾಗಿಗಳಾಗಿ ಪ್ರಯೋಜನವನ್ನು ಪಡೆಯುವುದು ಪ್ರತಿಯೊಬ್ಬರ ಕರ್ತ್ಯವಾಗಬೇಕು ಎಂದರು.
ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮವು ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಮೂಲಕ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಭಾಗದಿಂದ ಹೊರತಂದ ತಾಂತ್ರಿಕ ಸಂಚಿಕೆ ‘ಡಾಟಾ ಸ್ಪಿಯರ್’ ಅನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮ ಸಂಯೋಜಕ ಪ್ರೊ.ಚೈತನ್ಯ.ಡಿ ಮತ್ತು ವಿದ್ಯಾರ್ಥಿ ಪ್ರತಿನಿಧಿ ಅಭಿಷೇಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಿಂಚನಲಕ್ಷ್ಮಿ ಸ್ವಾಗತಿಸಿ, ಧೃತಿ ವಂದಿಸಿದರು. ಸುಪ್ರೀತ್ ಕಾರ್ಯಕ್ರಮ ನಿರ್ವಹಿಸಿದರು.