ಸಿರಿಧಾನ್ಯ ಪಾಕ ಸ್ಪರ್ಧೆ: ಶಶ್ಮಿ ಭಟ್ ಅಜ್ಜಾವರ ರಾಜ್ಯಮಟ್ಟಕ್ಕೆ ಆಯ್ಕೆ…
ಸುಳ್ಯ: ಕೃಷಿ ಇಲಾಖೆ ಮತ್ತು ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಗಳೂರು ಇವರ ನೇತೃತ್ವದಲ್ಲಿ ಲೋಕೋಪಯೋಗಿ ಕಟ್ಟಡ ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಕಾಣೆಯಾಗುತ್ತಿರುವ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಶಶ್ಮಿ ಭಟ್ ಅಜ್ಜಾವರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಜಿಲ್ಲೆಯ ತಾಲೂಕುಗಳಿಂದ 70 ಕ್ಕೂ ಮಿಕ್ಕಿ ಮಹಿಳಾ ಸ್ಪರ್ಧಿಗಳು ಭಾಗಹಿಸಿದ್ದರು. ಸಿರಿಧಾನ್ಯದ ಸಿಹಿಖಾದ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಶಶ್ಮಿ ಭಟ್ ಅಜ್ಜಾವರ ಅವರು ಚೈತ್ರ ಯುವತಿ ಮಂಡಲದ ಅಧ್ಯಕ್ಷೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಸುಳ್ಯ, ಸುಳ್ಯ ಪಯಸ್ವಿನಿ ಐಜೇಸಿಯ ಸಕ್ರಿಯ ಸದಸ್ಯೆಯಾಗಿದ್ದು ಕ್ರಿಯಾಶೀಲ ವ್ಯಕ್ತಿತ್ವವನ್ನು ಹೊಂದಿದ್ದಾರೆ.