ಸರಕಾರಿ ಪ. ಪೂ. ಕಾಲೇಜು ಸಜೀಪ ಮೂಡ- ವಾರ್ಷಿಕೋತ್ಸವ…

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡ ಇದರ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ. 6 ರಂದು ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಚಾರ್ಯರಾದ ಸುರೇಶ್ ಬಿ ಐತಾಳ ಸ್ವಾಗತಿಸಿ, ವಿದ್ಯಾರ್ಥಿಗಳು ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಗೌರವಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ವಿದ್ಯಾರ್ಥಿಗಳು ಶಿಸ್ತು, ಸಂಯಮ, ಶ್ರದ್ಧೆ, ವಿನಯ, ತಾಳ್ಮೆಯಿಂದ ಒಳ್ಳೆಯ ವಿದ್ಯೆ ಕಲಿತು ಹೆತ್ತವರಿಗೆ ಹಾಗೂ ಕಲಿತ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತರುವಂತೆ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.
ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಕೊಟ್ಟಾರಿ, ಸುರೇಶ್ ಶೆಟ್ಟಿ, ಉಪನ್ಯಾಸಕರಾದ ಬಾಲಕೃಷ್ಣ ಎನ್. ವಿ, ಗಾಯತ್ರಿ, ಭಾರತಿ, ಯಶೋಧ, ಸಿಂಧುಜ, ಸ್ಪೂರ್ತಿ, ಸುಂದರಿ, ಶೋಭಾ, ಬಾಲಕೃಷ್ಣ ನಾಯಕ್, ಸಿಬ್ಬಂದಿಗಳಾದ ಲತಾ, ಸಂಜೀವ ಪೂಜಾರಿ, ಹಾಗೂ ಪೋಷಕರು ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ ನೆರವೇರಿತು.

whatsapp image 2025 01 06 at 2.44.35 pm

Sponsors

Related Articles

Back to top button