ಅಯೋಧ್ಯೆ ತೀರ್ಪು – ಪೇಜಾವರ ಸ್ವಾಮೀಜಿ ಹರ್ಷ…..
ಉಡುಪಿ: ವಿವಾದಿತ ಅಯೋಧ್ಯೆ – ಬಾಬರಿ ಮಸೀದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಪ್ರಕಟಿಸಿರುವ ಐತಿಹಾಸಿಕ ತೀರ್ಪು ವೈಯುಕ್ತಿವಾಗಿ ಸಂತೋಷ ತಂದಿದೆ. ನನ್ನ ಇಳಿ ವಯಸ್ಸಿನಲ್ಲಿ ಈ ತೀರ್ಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ ಎಂದು ಪೇಜಾವರ ಮಠದ ಸ್ವಾಮೀಜಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.
ಎಲ್ಲರೂ ತೀರ್ಪನ್ನು ಸಮಚಿತ್ತದಿಂದ ಸ್ವೀಕರಿಸಬೇಕು ನನಗೆ ವೈಯಕ್ತಿಕವಾಗಿಯೂ ಈ ತೀರ್ಪು ಸಮ್ಮತವಾಗಿದೆ. ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಸರಕಾರವೇ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬ ತೀರ್ಪು ಬಂದಿದೆ. ಹಿಂದೂಗಳಿಗೆ ಜನ್ಮಭೂಮಿಯ ಹಕ್ಕು ಮುಖ್ಯ ಅದೇ ರೀತಿ ಮುಸಲ್ಮಾನರಿಗೆ ಮಸೀದಿಗೆ ಜಾಗ ಮುಖ್ಯ. ಈ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಎಂದರು.