ಅರಂತೋಡು- ತೊಡಿಕಾನ ಪ್ರಾ.ಕೃ.ಪ ಸಹಕಾರ ಸಂಘದ ಅಧ್ಯಕ್ಷರಾಗಿ ಸಂತೋಷ್‌ ಕುತ್ತಮೊಟ್ಟೆ ಪುನರಾಯ್ಕೆ…

ಸುಳ್ಯ: ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಂತೋಷ್‌ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಅವರು ಅವಿರೋಧವಾಗಿ ಆಯ್ಕೆಯಾದರು.
ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಸಂತೋಷ್‌ ಕುತ್ತಮೊಟ್ಟೆ ಪುನರಾಯ್ಕೆಗೊಂಡರು. ಹಾಗೂ ಉಪಾಧ್ಯಕ್ಷರಾಗಿ ನೂತನ ನಿರ್ದೇಶಕರಾದ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಅವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷತೆಗೆ ಸಂತೋಷ್‌ ಕುತ್ತಮೊಟ್ಟೆ ಮತ್ತು ಉಪಾಧ್ಯಕ್ಷತೆಗೆ ಡಾ. ಲಕ್ಷ್ಮೀಶ ಕಲ್ಲುಮುಟ್ಲು ಮಾತ್ರ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು. ಸಹಕಾರಿ ಇಲಾಖೆಯ ಅಧಿಕಾರಿ ಶಿವಲಿಂಗಯ್ಯ ಚುನಾವಣಾಧಿಕಾರಿಯಾಗಿದ್ದರು.
ಇತ್ತೀಚೆಗೆ ನಡೆದ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಸಂತೋಷ್‌ ಕುತ್ತಮೊಟ್ಟೆ ಸತತ ಮೂರನೇ ಬಾರಿಗೆ ಈ ಸಹಕಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು. ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.

whatsapp image 2025 01 08 at 2.58.09 pm

Sponsors

Related Articles

Back to top button