ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು- ಎಂಬಿಎ ವಿಭಾಗದ ಸ್ನೇಹಾ ಪೈ ಅವರಿಗೆ ರ‍್ಯಾಂಕ್‌…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ಪೈ.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಎಂಬಿಎ ಪರೀಕ್ಷೆಯಲ್ಲಿ 9.22 ಸಿಜಿಪಿಎ ಅಂಕಗಳೊಂದಿಗೆ 5ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.
ಹೆಚ್.ಆರ್ ಮತ್ತು ಫೈನಾನ್ಸ್ ಐಚ್ಚಿಕ ವಿಷಯಗಳನ್ನು ಅಭ್ಯಸಿಸಿರುವ ಈಕೆ ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ಹಾಗೂ ಇತರ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ.
ಈಕೆ ಪುತ್ತೂರಿನ ಶ್ರೀಮತಿ ರಾಧಿಕಾ.ಬಿ.ಪೈ ಹಾಗೂ ಶ್ರೀ.ಕೆ.ಬಾಲಕೃಷ್ಣ ಪೈ ಅವರ ಪುತ್ರಿಯಾಗಿದ್ದು, ಪ್ರಸ್ತುತ ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯಲ್ಲಿ ಹೆಚ್.ಆರ್. ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅವರನ್ನು ಅಭಿನಂದಿಸಿದ್ದಾರೆ.

Related Articles

Back to top button