ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ರಾಜೇಶ್ವರಿ.ಎಂ ಅವರಿಗೆ ಡಾಕ್ಟರೇಟ್ ಪದವಿ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಪಯನೀಯರಿಂಗ್ ಫೇಶಿಯಲ್ ಇಮೋಶನ್ ಅನಾಲಿಟಿಕ್ಸ್: ಏನ್ ಇನೋವೇಟಿವ್ ಫ್ಯೂಷನ್ ಆಫ್ ಡೀಪ್ ಲರ್ನಿಂಗ್ ಎಂಡ್ ವೈಟ್ ನಾರ್ಮಲೈಸ್ಡ್ ಗ್ರೇಡಿಯೆಂಟ್ ಬೂಸ್ಟಿಂಗ್ ಟೆಕ್ನಿಕ್ಸ್ (Pioneering facial emotion analytics: An innovative fusion of deep learning and weight normalized gradient boosting technics) ಎನ್ನುವ ವಿಷಯದ ಬಗ್ಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಸುರೇಶ.ಡಿ ಹಾಗೂ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಕೃಷ್ಣಪ್ರಸಾದ್.ಡಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಮಾಡಿದ್ದಾರೆ. 21 ವರ್ಷಗಳ ಬೋಧನಾ ಅನುಭವವನ್ನು ಹೊಂದಿರುವ ಇವರು ಕಾಲೇಜಿನ ಎಂಸಿಎ ವಿಭಾಗದ ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನದ ಬಗ್ಗೆ ತಮ್ಮ ಅಪಾರ ತಿಳುವಳಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.
ಡಾ.ರಾಜೇಶ್ವರಿ.ಎಂ ಅವರ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.

Sponsors

Related Articles

Back to top button