ವಿಶ್ವ ಮಹಿಳಾ ದಿನಾಚರಣೆ…

ಸುಳ್ಯ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಂಜೀವಿನಿ ಒಕ್ಕೂಟದ ವತಿಯಿಂದ ಸಂಜೀವಿನಿ ಒಕ್ಕೂಟದ ಸ್ವ ಸಹಾಯ ಸಂಘಗಳ ಸದಸ್ಯರುಗಳಿಗೆ ವಿವಿಧ ಕ್ರೀಡಾಕೂಟ ದ, ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿ ವೇಲು ದೀಪ ಬೆಳಗಿಸಿ ಉದ್ಘಾಟಿಸಿದರು.
ಕ್ರೀಡಾಕೂಟದ ಯಶಸ್ವಿ ಯಾಗಲಿ ಸಂಜೀವಿನಿ ಒಕ್ಕೂಟದ ವತಿಯಿಂದ ಇನ್ನಷ್ಟೂ ಕಾರ್ಯಕ್ರಮ ಮೂಡಿ ಬರಲಿ ಎಂದು ಅವರು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಿಲ್ಪಾ ಶನತ್ ವಹಿಸಿದ್ದರು ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ.ಹನೀಫ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ , ಶ್ರೀಮತಿ ಸುಂದರಿ ಸದಸ್ಯರುಗಳಾದ , ಶ್ರೀಮತಿ ರಜನಿ ಶರತ್, ಲಿಸ್ಸಿ ಮೊನಾಲಿಸಾ, ಶ್ರೀಮತಿ ವಿಮಲಾ ಪ್ರಸಾದ್ ,ಉಪಸ್ಥಿತರಿದ್ದರು ಕಾಂತಿ ಬಿ ,ಎಸ್, ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಯಮುನಾ ಬಿ ,ಎಸ್, ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿದ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು