ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು- ಸ್ವಯಂಪ್ರೇರಿತ ರಕ್ತದಾನ ಶಿಬಿರ…

ಪುತ್ತೂರು: ರಕ್ತಕ್ಕೆ ಪರ್ಯಾಯವಿಲ್ಲ, ಯಾವ ಸಂದರ್ಭದಲ್ಲಿಯೂ ಮನುಷ್ಯನಿಗೆ ರಕ್ತದ ಆವಶ್ಯಕತೆ ಉಂಟಾಗಬಹುದು. ಹಾಗಾಗಿ ರಕ್ತದಾನವು ನಾವು ಇತರರಿಗೆ ನೀಡಬಹುದಾದ ಅಮೂಲ್ಯ ಹಾಗೂ ಜೀವ ಉಳಿಸುವ ಕೊಡುಗೆಯಾಗಿದೆ ಎಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ಸೀತಾರಮ ಭಟ್.ಕೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‍ಕ್ರಾಸ್ ಮತ್ತು ಎನ್‍ಎಸ್‍ಎಸ್ ಘಟಕ ಹಾಗೂ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ರಕ್ತದಾನದ ನಂತರ ಆವಶ್ಯಕತೆಯುಳ್ಳ ರೋಗಿಗೆ ಅದನ್ನು ನೀಡುವ ಮೊದಲು ಯಾವೆಲ್ಲಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಮತ್ತು ರಕ್ತದಾನದ ಪರಿಣಾಮಗಳ ಬಗ್ಗೆ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ವಿಶ್ವಾಸ್ ಶೆಣೈ ಮಾತನಾಡಿ ಸಾಮಾಜದ ಆವಶ್ಯಕತೆಗನುಗುಣವಾಗಿ ವಿವಿಧ ಸಂಘ ಸಂಸ್ಥೆಗಳ ಜತೆ ಸೇರಿ ಕಾಲೇಜಿನಲ್ಲಿ ಪ್ರತಿವರ್ಷವೂ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ. ವಿದ್ಯಾರ್ಥಿಗಳು ಸ್ವಯಂಸ್ಪೂರ್ಥಿಯಿಂದ ಈ ಮಹತ್ತರ ಕಾರ್ಯದಲ್ಲಿ ಭಾಗವಹಿಸುತ್ತಾರೆ. ಇಂತಹ ಮಹತ್ಕಾರ್ಯಗಳ ಮೂಲಕ ಸಮಾಜದ ಒಳಿತಿಗಾಗಿ ತನ್ನ ಸೇವೆಯನ್ನು ನೀಡುವುದಕ್ಕೆ ಕಾಲೇಜು ಸದಾ ಸಿದ್ಧವಾಗಿದೆ ಎಂದರು. ಈ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಕಾಲೇಜಿನ ಯೂತ್ ರೆಡ್‍ಕ್ರಾಸ್ ಮತ್ತು ಎನ್‍ಎಸ್‍ಎಸ್ ಘಟಕದ ಸಾಧನೆಯನ್ನು ಅವರು ಶ್ಲಾಘಿಸಿದರು.
ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಎನ್‍ಎಸ್‍ಎಸ್ ವಿಭಾಗದ ಸಂಯೋಜಕಿ ಪ್ರೊ.ನಿಶಾ.ಜಿ.ಆರ್ ಸ್ವಾಗತಿಸಿ ಯೂತ್ ರೆಡ್‍ಕ್ರಾಸ್ ಘಟಕದ ಸಂಯೋಜಕ ಪ್ರೊ. ಅಭಿಷೇಕ್ ಕುಮಾರ್.ಕೆ ವಂದಿಸಿದರು. ವಿದ್ಯಾರ್ಥಿನಿ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.
ಆವಶ್ಯಕತೆಗೆ ತಕ್ಕಂತೆ ಒಟ್ಟು 60 ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಇವರಿಗೆ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರ ಪುತ್ತೂರು ಇದರ ವತಿಯಿಂದ ಪ್ರಮಾಣ ಪತ್ರ ವಿತರಿಸಲಾಯಿತು.

blood donation camp (3)

blood donation camp (2)

Sponsors

Related Articles

Back to top button