ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬರಿಮಾರ್ ರಾಜ್ಯಮಟ್ಟಕ್ಕೆ ಆಯ್ಕೆ…

ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ,ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ 2024- 25 ರ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಲಾಂಗ್ ಜಂಪ್ ನಲ್ಲಿ ತೃತೀಯ ಸ್ಥಾನ ಪಡೆದ ಕೆಪಿಎಸ್ ಹೈ ಸ್ಕೂಲ್ ಮೊಂಟೆಪದವು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬರಿಮಾರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.