ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕೆ ಎಂ ಮುಸ್ತಾಫ ನೇಮಕ- ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದನೆ…

ಸುಳ್ಯ: ಬಹು ಜನರ ನಿರೀಕ್ಷೆಯ ಸುಳ್ಯ ನಗರ ಯೋಜನಾ ಪ್ರಾಧಿಕಾರ ರಚಿಸಿ ಅದರ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ ಮುಖಂಡ ಕೆ ಎಂ ಮುಸ್ತಾಫ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದಿಸಿದ್ದಾರೆ.
ಅವರ ನೇಮಕಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮತ್ರಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್, ಸಚಿವರಾದ ದಿನೇಶ್ ಗುಂಡೂರಾವ್, ಬೈರತಿ ಸುರೇಶ್ ಮತ್ತು ಎಲ್ಲಾ ಕಾಂಗ್ರೆಸ್ ಮುಖಂಡರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.