ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಪೇರಡ್ಕ ತೆಕ್ಕಿಲ್ ಮೊಹಮ್ಮದ್ ಹಾಜಿ ಮೆಮೋರಿಯಲ್ ತಕ್ವಿಯತುಲ್ ಇಸ್ಲಾಂ ಮದರಸ ಪೇರಡ್ಕ ಗೂನಡ್ಕ ಹಯಾತುಲ್ ಇಸ್ಲಾಂ ಮದರಸಕ್ಕೆ ನೂರು ಶೇಕಡ ಫಲಿತಾಂಶ…
ಸುಳ್ಯ: ಸಂಪಾಜೆ ಗೂನಡ್ಕ ಪೇರಡ್ಕ ಮೋಹಿಯದ್ದಿನ್ ಜುಮ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪೇರಡ್ಕ ತೆಕ್ಕಿಲ್ ಮೊಹಮ್ಮದ್ ಹಾಜಿ ಮೆಮೋರಿಯಲ್ ತಕ್ವಿಯತುಲ್ ಇಸ್ಲಾಂ ಮದರಸ ಮತ್ತು ಗೂನಡ್ಕ ಹಯಾತುಲ್ ಇಸ್ಲಾಂ ಮದರಸ ಇದರ ಮದರಸ ವಿದ್ಯಾರ್ಥಿಗಳು ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡ ನೂರು ಫಲಿತಾಂಶ ದಾಖಲಿಸಿದ್ದು ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು, ಏಳನೇ ತರಗತಿಯ ಮೂರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ. ಇದಕ್ಕೆ ಶ್ರಮಿಸಿದ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಖತೀಬ್ ನಹೀಮ್ ಫೈಜಿ ಮತ್ತು ಅಧ್ಯಾಪಕರನ್ನು ಮತ್ತು ಶ್ರಮಿಸಿದ ಎಲ್ಲರನ್ನು ಮೋಹಿಯದ್ದಿನ್ ಜುಮಾ ಮಸ್ಜಿದ್ ಪೇರಡ್ಕ ಗೂನಡ್ಕದ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿ ಅಭಿನಂದಿಸಿದ್ದಾರೆ.




