ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ- ಸೌಹಾರ್ದ ಇಫ್ತಾರ್ ಕೂಟ…

ಸುಳ್ಯ: ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ ದಲ್ಲಿ ಸೌಹಾರ್ದ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು.
ಈ ಸೌಹಾರ್ದ ಇಫ್ತಾರ್ ಮೀಟ್ ನಲ್ಲಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸುಳ್ಯ ನಗರ ಯೋಜನಾ ಸಮಿತಿ ಅಧ್ಯಕ್ಷ ಕೆ. ಎಂ. ಮುಸ್ತಫ, ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆಎಂಎಸ್ ಮಹಮ್ಮದ್ ಉದ್ಯಮಿ ಅಬ್ದುಲ್ ಖಾದರ್ ಹಾಜಿ ಆಮ್ಚಿನಡ್ಕ, ಅಧ್ಯಕ್ಷ ಅಬ್ದುಲ್ ಮಜೀದ್ ಜನತ, ಕಾರ್ಯದರ್ಶಿ ಅಬ್ದುಲ್ ಲತೀಫ್ ಹರ್ಲಡ್ಕ ಮೊದಲಾದವರು ಭಾಗವಹಿಸಿದ್ದರು.