ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕೆ. ಎಂ. ಮುಸ್ತಫ ಅಧಿಕಾರ ಸ್ವೀಕಾರ…

ಸುಳ್ಯ:-ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಎಂ. ಮುಸ್ತಫ ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ಮಾ.17 ರಂದು ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
ಅಧ್ಯಕ್ಷತೆಯನ್ನು ದ. ಕ. ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ವಹಿಸಿ ಮಾತನಾಡಿ ಸುಳ್ಯದಲ್ಲಿ ಅಭಿವೃದ್ಧಿಯ ಹೊಸಪರ್ವ ಆರಂಭದ ಶುಭ ಸೂಚನೆ ಇದಾಗಿದೆ. ಪ್ರತ್ಯೇಕ ಪ್ರಾಧಿಕಾರ ರಚನೆ ಯ ಮೂಲಕ ಹೊಸ ಇತಿಹಾಸ ಸೃಷ್ಠಿಯಾಗಿದೆ ಎಂದರು.
ಸಮಾರಂಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಹೀದ್, ನಗರ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಎಂ. ವೆಂಕಪ್ಪಗೌಡ, ಎನ್. ಎ. ರಾಮಚಂದ್ರ, ಎಸ್. ಸಂಶುದ್ದೀನ್, ವಿನಯಕುಮಾರ್ ಕಂದಡ್ಕ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ದ. ಕ. ಜಿಲ್ಲೆ ನಗರ ಮತ್ತು ಗ್ರಾಮಾoತರ ಯೋಜನಾ ಸಹಾಯಕ ನಿರ್ದೇಶಕ ಪ್ರವೀಣ್, ಟೌನ್ ಪ್ಲಾನರ್ ಮಹಮ್ಮದ್ ಫೈರೋಜ್, ರಾಜ್ಯ ಸಹಕಾರಿ ಮಹಾಮಂಡಲ ನಿರ್ದೇಶಕ ಚಂದ್ರ ಕೊಲ್ಚಾರ್, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಗೋಕುಲ್ ದಾಸ್, ಶ್ರೀಮತಿ ಸರೋಜಿನಿ ಪೆಲ್ತಡ್ಕ, ದ. ಕ. ಗೌಡ ಯುವ ಸೇವಾ ಸಂಘ ದ ಅಧ್ಯಕ್ಷ ಪಿ. ಎಸ್. ಗಂಗಾಧರ್,ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸಂಪಾಜೆ ಗ್ರಾ. ಪಂ. ಸದಸ್ಯ ಜಿ ಕೆ ಹಮೀದ್ ಮೊದಲಾದವರು ಉಪಸ್ಥಿತರಿದ್ದರು. ಶಶಿಧರ್ ಎಂ. ಜೆ ಸ್ವಾಗತಿಸಿ, ವಂದಿಸಿದರು.

Sponsors

Related Articles

Back to top button