ಮಂಗಳೂರು ಮ ನ ಪಾ ಚುನಾವಣೆ ನ.12 ರಂದು ಶಾಲೆ, ಕಾಲೇಜುಗಳಿಗೆ ರಜೆ …..

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಇರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ನವೆಂಬರ್ 12 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಡಲು ಅನುಕೂಲವಗುವಂತೆ ರಜೆ ಆದೇಶ ಹೊರಡಿಸಲಾಗಿದೆ. ಮತದಾನದ ದಿನದ ರಜೆ ವೇತನ ಸಹಿತ ನೀಡಲು ಜಿಲ್ಲಾಡಳಿತದಿಂದ ಆದೇಶ ಮಾಡಲಾಗಿದೆ. ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881 ಪ್ರಕಾರ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

MCC Elections Colleges And Govt Offices On Nov 12 300x200

 

Related Articles

Leave a Reply

Your email address will not be published. Required fields are marked *