ಸುಳ್ಯದಲ್ಲಿ ವ್ಯಕ್ತಿ ತ್ವ ವಿಕಸನ ಕಾರ್ಯಾಗಾರ…

ಸುಳ್ಯ: ಡಾ.ವಾಮನ್ ರಾವ್ ಬೇಕಲ್ ಸಾರಥ್ಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾಸರಗೋಡು ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಸಹಯೋಗದಲ್ಲಿ ಏ.3 ರಂದು ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಜಾಲ್ಸೂರಿನಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿ ದ.ಕ.ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಾ. ಗೋವಿಂದ ಭಟ್ ಕೊಳ್ಚಪ್ಪೆ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ ರಾದ ಡಾ.ಶಾಂತಾ ಪುತ್ತೂರು,ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಾದ ವಿರಾಜ್ ಅಡೂರು , ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ ಶ್ರೀ ಜಯಾನಂದ ಪೆರಾಜೆ ಶಿಬಿರ ಸಂಪನ್ಮೂಲ ವ್ಯಕ್ತಿಗಳಾಗಿ ವಿವಿಧ ವಿಷಯಗಳ ತರಬೇತಿ ನೀಡಿದರು.
ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ಖುಷಿ ಪಟ್ಟರು.
ವಿವೇಕಾನಂದ ವಿದ್ಯಾಸಂಸ್ಥೆ ವಿನೋಬ ನಗರ ಇದರ ಅಧ್ಯಕ್ಷರಾದ ನ.ಸೀತಾರಾಮ ಕಾರ್ಯಕ್ರಮ ಉದ್ಘಾಟಿಸಿದರು. ಡಾ.ಗೋವಿಂದ ಭಟ್ ಕೊಳ್ಚಪ್ಪೆ ಸಭಾಧ್ಯಕ್ಷತೆ ವಹಿಸಿದ್ದರು.
ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀ ಜಯಾನಂದ ಪೆರಾಜೆ, ಡಾ.ಶಾಂತಾ ಪುತ್ತೂರು ಶುಭಾಶಯ ಕೋರಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಗಿರೀಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನ.ಸೀತಾರಾಮರವರನ್ನು ಘಟಕದಿಂದ ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿ ಗಳಿಗೆ ಸ್ಮರಣಿಕೆ ನೀಡಿದರು.
ಶಿಕ್ಷಕಿ ಪಾವನ ಕೆ.ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಜಯಪ್ರಸಾದ ಕಾರಿಂಜ , ಶಿಕ್ಷಕರಾದ ಅಕ್ಷಯ ನವೀನ, ಶಶಿಧರ ಸಹಕರಿಸಿದರು. ಶಿಕ್ಷಕರು ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಸಹಕರಿಸಿದರು.