ಅತ್ಯುನ್ನತ ತಾಂತ್ರಿಕ ಶಿಕ್ಷಣಕ್ಕಾಗಿ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು 2001ನೇ ಇಸವಿಯಲ್ಲಿ ಪ್ರಾರಂಭಗೊಂಡಿದ್ದು 25ನೇ ವರ್ಷದತ್ತ ದಾಪುಗಾಲಿಡುತ್ತಿದೆ.
ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ಪ್ರಾರಂಭವಾದ ಈ ಸಂಸ್ಥೆ ಇಂದು ಕರಾವಳಿ ಭಾಗದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಗಳು ಇದುವರೆಗೆ ಒಟ್ಟು 20 ರ‍್ಯಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 2 ಹಾಗೂ ಎಂಬಿಎ ವಿಭಾಗದಲ್ಲಿ ಒಂದು ರ‍್ಯಾಂಕ್ ಬಂದಿರುತ್ತದೆ. ಪ್ರಾರಂಭದ ದಿನದಿಂದ ಇದುವರೆಗೆ ಒಟ್ಟು 6163 ವಿದ್ಯಾರ್ಥಿಗಳು ಪದವಿ ಹಾಗೂ 770 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದು ಕೇಂದ್ರ, ರಾಜ್ಯ ಸರ್ಕಾರದ ಮತ್ತು ಕಾರ್ಪೊರೇಟ್ ಜಗತ್ತಿನ ವಿವಿಧ ಮಜಲುಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಭಾರತೀಯ ಸೇನೆ, ಭಾರತೀಯ ನಾಗರಿಕ ಸೇವೆ, ಬ್ಯಾಂಕಿಂಗ್, ಕಾನೂನು, ಶೈಕ್ಷಣಿಕ ವ್ಯವಸ್ಥೆ, ಸಾಫ್ಟ್‍ವೇರ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಉನ್ನತ ಹುದ್ದೆಯನ್ನು ಗಳಿಸಿಕೊಂಡು ಜೀವನವನ್ನು ಸುಭದ್ರಗೊಳಿಸಿದ್ದಾರೆ. ಈ ವರ್ಷ ಇದುವರೆಗೆ 74 ಕ್ಕೂ ಮಿಕ್ಕಿ ಕಂಪೆನಿಗಳು ಕಾಲೇಜಿಗೆ ಕ್ಯಾಂಪಸ್ ನೇಮಕಾತಿಗಾಗಿ ಆಗಮಿಸಿದ್ದು, 200 ಕ್ಕೂ ಮಿಕ್ಕಿ ಅರ್ಹ ವಿದ್ಯಾರ್ಥಿಗಳು ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಕೆಲ ಪ್ರತಿಭಾವಂತ ವಿದ್ಯಾರ್ಥಿಗಳು ಒಂದಕ್ಕಿಂತ ಹೆಚ್ಚು ಕಂಪೆನಿಗಳಲ್ಲಿ ಆಯ್ಕೆಗೊಂಡಿದ್ದಾರೆ. ಇನ್ನೂ ಅನೇಕ ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿದ್ದು ಪ್ರಕ್ರಿಯೆಯು ಮುಂದುವರಿಯುತ್ತಿದೆ. ಗರಿಷ್ಟ 15 ಲಕ್ಷಗಳ ವಾರ್ಷಿಕ ವೇತನದ ಹುದ್ದೆಗೆ ನಮ್ಮ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದು ಇದು ಕಾರ್ಪೊರೇಟ್ ಜಗತ್ತಿನೊಂದಿಗಿನ ಸಂಪರ್ಕ ಮತ್ತು ಕಾಲೇಜಿನಲ್ಲಿ ನೀಡುತ್ತಿರುವ ತರಬೇತಿಯ ಗುಣಮಟ್ಟಕ್ಕೆ ನಿದರ್ಶನವಾಗಿದೆ. ಇಂಡಸ್ಟ್ರಿಗಳು ಬಯಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸನ್ನದ್ದಗೊಳಿಸುವ ನಿಟ್ಟಿನಲ್ಲಿ ಕಾಲೇಜು ಅನೇಕ ಸಂಸ್ಥೆಗಳೊಂದಿಗೆ ತಿಳುವಳಿಕೆಯ ಒಪ್ಪಂದವನ್ನು ಮಾಡಿಕೊಂಡಿದ್ದು, ಸೆಂಟರ್ ಆಫ್ ಎಕ್ಸಲ್ಲೆನ್ಸ್ ಕೇಂದ್ರಗಳನ್ನೂ ತೆರೆಯಲಾಗಿದೆ. ಪ್ರಾಜೆಕ್ಟ್ ಟೂ ಪ್ರಾಡಕ್ಟ್ ಎನ್ನುವ ಪರಿಕಲ್ಪನೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳಿಗೆ ಮೂರ್ತಸ್ವರೂಪವನ್ನು ನೀಡಿ ಅದನ್ನೊಂದು ಉತ್ಪನ್ನವನ್ನಾಗಿಸುವ ನಿಟ್ಟಿನಲ್ಲಿ ಕಾಲೇಜು ಸಹಕಾರವನ್ನು ನೀಡುತ್ತಿದ್ದು, ಸ್ಟಾರ್ಟಪ್‍ಗಳನ್ನು ಪ್ರಾರಂಭಿಸುವವರಿಗೆ ಸೂಕ್ತ ಸವತ್ತುಗಳನ್ನು ಒದಗಿಸುವಲ್ಲಿ ನಿರತವಾಗಿದೆ. ತಾಂತ್ರಿಕ ಶಿಕ್ಷಣದ ಜತೆಯಲ್ಲಿ ನೈತಿಕ ಶಿಕ್ಷಣವನ್ನೂ ಇಲ್ಲಿ ನೀಡಲಾಗುತ್ತಿದ್ದು, ಸಮಾಜದ ಸತ್ಪ್ರಜೆಗಳಾಗಿ ಜೀವನವನ್ನು ನಡೆಸಲು ಅಗತ್ಯವಾದ ಜೀವನ ಮೌಲ್ಯಗಳನ್ನು ತಿಳಿಸಲಾಗುತ್ತದೆ.
ಪಠ್ಯೇತರ ಚಟುವಟಿಕೆಗಳಿಗೆ ಇಲ್ಲಿ ಸಾಕಷ್ಟು ಪ್ರೋತ್ಸಾಹವನ್ನು ನೀಡಲಾಗುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಸತತ 3 ಬಾರಿ ಚಾಂಪಿಯನ್‍ಗಳಾಗಿ ಹೊರಹೊಮ್ಮಿದ್ದಾರೆ. ಇದಲ್ಲದೆ ಆಟೋಟ ಸ್ಪರ್ಧೆಗಳಲ್ಲೂ ಅನೇಕ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಇಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳು ಅಂತರ್ ವಿಶ್ವವಿದ್ಯಾನಿಲಯ ಸ್ಪರ್ಧೆಗಳಲ್ಲಿ ವಿಟಿಯುವನ್ನು ಪ್ರತಿನಿಧಿಸಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಅಪೂರ್ವ ಸಾಧನೆಯನ್ನು ಮಾಡಿದ್ದು, ಇತ್ತೀಚಿಗೆ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ 2 ಚಿನ್ನ ಹಾಗೂ ಒಂದು ಕಂಚಿನ ಪದಕದ ಸಾಧನೆಯನ್ನು ಮಾಡಿದ್ದಾರೆ.
ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್, ಡಾಟಾ ಸೈನ್ಸ್, ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಸನ್, ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ವಿಭಾಗಗಳು ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಪದವಿ ವಿಭಾಗಗಳಿವೆ. ಪ್ರಸಕ್ತ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದಾಖಲಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ಮೊಬೈಲ್ ಸಂಖ್ಯೆ- 9845065506 ಇವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.