ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ 10 ಹೆಚ್ಚುವರಿ ಅಂಕ ಪಡೆದ ಆಕಾಶ್.ಎಚ್.ಪಿ…

ಸುಳ್ಯ: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಕಾಶ್ .ಎಚ್.ಪಿ.ಇತಿಹಾಸ ವಿಷಯದಲ್ಲಿ 10 ಅಂಕಗಳನ್ನು ಹೆಚ್ಚುವರಿ ಪಡೆದು 91 ಅಂಕಕ್ಕೆ ಏರಿಕೆ ಆಗಿದೆ. ಆ ಮೂಲಕ 547 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಕಾಲೇಜಿನ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,91 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಒಟ್ಟಾರೆಯಾಗಿ ಶೇಕಡಾ 95 ಫಲಿತಾಂಶ ಪಡೆದುಕೊಂಡಿದೆ

Sponsors

Related Articles

Back to top button