ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – NIA ಗೆ ಹಸ್ತಾಂತರಿಸುವಂತೆ ರಾಜ್ಯಪಾಲರಿಗೆ ಮನವಿ…

ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್. ಐ. ಎ. ತನಿಖೆಗೆ ಹಸ್ತಾಂತರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ, ವಿಧಾನ ಸಭಾ ವಿಪಕ್ಷ ನಾಯಕರಾದ ಶ್ರೀ ಆರ್ ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಹಾಗೂ ಸಂಸದರ ನಿಯೋಗ ಕರ್ನಾಟಕದ ಘನವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರನ್ನು ಮೃತ ಸುಹಾಸ್ ಶೆಟ್ಟಿಯವರ ತಂದೆ ತಾಯಿಯವರೊಂದಿಗೆ ರಾಜಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿ, ಸುಹಾಸ್ ಶೆಟ್ಟಿ ಮಾವ ರಾಜೇಶ್ ಭಂಡಾರಿ, ಕಾವಳಮುಡೂರು ಗ್ರಾ.ಪಂ ಅಧ್ಯಕ್ಷರಾದ ಅಜಿತ್ ಶೆಟ್ಟಿಯವರು ಸುಹಾಸ್ ಕುಟುಂಬದೊಂದಿಗೆ ಉಪಸ್ಥಿತರಿದ್ದರು.