ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಮೇ. 26 ರಂದು ಜ್ಞಾನ ಸಂಗಮ-2025…

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು, ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಸೆಲ್ ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2025 ಮೇ. 26 ರಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ.
ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್ ಗಳಿಗೆ ಸಂಬಂದಿಸಿದಂತೆ ಪ್ರಬಂಧಗಳನ್ನು ಮಂಡಿಸುವುದರ ಮೂಲಕ ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಮತ್ತು ವಿದ್ಯಾರ್ಥಿಗಳಿಗೆ ಸಂಶೋಧನಾ ವಿಭಾಗದಲ್ಲಿ ಹೆಚ್ಚು ಆಸಕ್ತಿಯನ್ನು ಮೂಡಿಸುವುದರ ಜತೆಯಲ್ಲಿ ಅವರನ್ನು ಉತ್ತಮ ತಂತ್ರಜ್ಞರನ್ನಾಗಿಸುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿದೆ.
ವಿವಿಧ ಕಾಲೇಜುಗಳ ಇಂಜಿನಿಯರಿಂಗ್ ವಿಭಾಗದ ಸುಮಾರು 400 ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದು ವಿವಿಧ ವಿಭಾಗಗಳಲ್ಲಿ ಒಟ್ಟು 75 ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಅಲ್ಲದೆ ಪ್ರಾಜೆಕ್ಟ್ ಗಳಿಗೆ ಸಂಬಂಧಪಟ್ಟ 50 ಕ್ಕೂ ಮಿಕ್ಕಿ  ಪೋಸ್ಟರ್ ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಇಲ್ಲಿ ಮಂಡಿಸಲ್ಪಡುವ ಎಲ್ಲಾ ಪ್ರೌಢ ಪ್ರಬಂಧಗಳನ್ನು ಮುದ್ರಿಸಿ ಸಂಚಿಕೆಯ ರೂಪದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು.
ಆ ದಿನ ಬೆಳಿಗ್ಗೆ 9.30ಕ್ಕೆ ನಡೆಯುವ ಉಧ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ದಯಾನಂದ್ ಸಾಗರ್ ಕಾಲೆಜ್ ಆಫ್ ಎಂಜಿನಿಯರಿಂಗ್‍ನ ಅಟೋಮೊಬೈಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪುನೀತ್.ಎನ್.ಪಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಶ್ರೀ.ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಅದೇ ದಿನ ಸಂಜೆ 3.00 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಸ್‍ಡಿಎಂಐಟಿ ಉಜಿರೆಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಪ್ರೊಫೆಸರ್ ಡಾ.ಸಂದೀಪ್.ಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ.ಬಿ ಅಧ್ಯಕ್ಷತೆ ವಹಿಸುತ್ತಾರೆ. ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

whatsapp image 2025 05 20 at 8.32.36 pm

whatsapp image 2025 05 20 at 8.32.56 pm

Sponsors

Related Articles

Back to top button