ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ-ಚಾಲಕ ವಿಧಿವಶ…

ಬಂಟ್ವಾಳ:ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬಿಸಿರೋಡಿನಲ್ಲಿ ಮುಂಜಾನೆ ವೇಳೆ ನಡೆದಿದೆ.
ಮಂಚಿಕೊಳ್ನಾಡು ನೂಜಿ ನಿವಾಸಿ ಜಯರಾಮ (57) ಎಂಬವರು ಮೃತ ರಾಗಿದ್ದು‌ ಅವರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಅವರು ಬೆಳಿಗ್ಗೆ ಸುಮಾರು‌ 4.30ರ ಹೊತ್ತಿಗೆ ಮನೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಜೋರಾಗಿ ಮಳೆಸುರಿದು ಕಾರು ನಿಯಂತ್ರಣ ಕಳೆದುಕೊಂಡು ಬಿಸಿರೋಡು ಪೇಟೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ‌ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ದಾಖಲಿಸಿದ್ದಾರೆ.

Sponsors

Related Articles

Back to top button