ಹಿರಿಯ ಯಕ್ಷಗಾನ ಕಲಾವಿದರಾದ ವಿಷ್ಣುಶರ್ಮ ವಾಟೆಪಡ್ಪು ಹಾಗೂ ಚಂದ್ರಹಾಸ ತುಂಬೆ ಇವರಿಗೆ ಸನ್ಮಾನ…

ಬಂಟ್ವಾಳ :ಹಿರಿಯ ಯಕ್ಷಗಾನ ಕಲಾವಿದ ಕೀರ್ತಿಶೇಷ ಪುಳಿಂಚ ರಾಮಯ್ಯ ಶೆಟ್ಟಿಯವರ ಸುಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಇವರ ಸೇವಾ ರೂಪವಾಗಿ ಮೇ 23ರಂದು ಶುಕ್ರವಾರ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಲ್ಲುರ್ಟಿ ದೇವಸ್ಥಾನದ ವಠಾರದಲ್ಲಿ ಶ್ರೀ ಕಟೀಲು ಮೇಳದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ವಿಷ್ಣುಶರ್ಮ ವಾಟೆಪಡ್ಪು ಹಾಗೂ ಚಂದ್ರಹಾಸ ತುಂಬೆ ಇವರನ್ನು ಗಣ್ಯ ಅಥಿತಿಗಳ ಸಮಕ್ಷಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಾರಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮುಕ್ತೇಸರರಾದ ರತ್ನಾಕರ ಶೆಟ್ಟಿ ಮೂಡಯೂರು, ಬಾಳ್ತಿಲ ಗ್ರಾ ಪಂ ಅಧ್ಯಕ್ಷ ಚಂದ್ರಶೇಖರ ಪೂಜಾರಿ,ಹಿರಿಯ ವಕೀಲರಾದ ಜಗದೀಶ ಶೇಣವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಪ್ರತಿಭಾ ಶ್ರೀಧರ ಶೆಟ್ಟಿ ಹಾಗೂ ಮನೆಯವರ, ಕಲಾಭಿಮಾನಿಗಳ ಗೌರವ ಉಪಸ್ಥಿತಿಯಲ್ಲಿ ಕಲಾವಿದರನ್ನು ಶಾಲು ಫಲಪುಷ್ಪ ಸ್ಮರಣಿಕೆ ಗೌರವನಿಧಿಯೊಂದಿಗೆ ಸನ್ಮಾನಿಸಲಾಯಿತು.
ಯಕ್ಷಗಾನ ಸಂಘಟಕ ಬಿ ಜನಾರ್ದನ ಅಮುಂಜೆ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Back to top button