ಅರುಣ್ ಕುಮಾರ್ ಪುತ್ತಿಲರಿಗೆ ಗಡಿಪಾರು ನೋಟಿಸ್- ವಿಚಾರಣೆಗೆ ಹಾಜರಾಗಲು ಸೂಚನೆ..

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‌ ಐಆರ್ ದಾಖಲಾದ ಬೆನ್ನಲ್ಲೇ ಪುತ್ತಿಲ ಪರಿವಾರ ಮುಖ್ಯಸ್ಥ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಅವರು ಅರುಣ್ ಕುಮಾರ್ ಪುತ್ತಿಲರಿಗೆ ಗಡಿಪಾರು ನೋಟಿಸ್ ನ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನಲ್ಲಿ ಉಲ್ಲೇಖಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳುವ ಬಗ್ಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ.

Related Articles

Back to top button