ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಹೆತ್ತವರ-ಪೋಷಕರ ಸಮಾವೇಶ….
ಪುತ್ತೂರು: ಅತಿಯಾದ ಮೊಬೈಲ್ ಬಳಕೆ ವಿದ್ಯಾರ್ಥಿಗಳ ಕಲಿಕೆಗೆ ಮಾರಕವಾಗಿ ಪರಿಣಮಿಸಿದ್ದು ಉಪಯೋಗಕ್ಕಿಂತ ತೊಂದರೆಯೇ ಹೆಚ್ಚಾಗಿದೆ, ಪೋಷಕರು ಈ ಬಗ್ಗೆ ಮಕ್ಕಳಿಗೆ ಸೂಕ್ತ ತಿಳುವಳಿಕೆಯನ್ನು ನೀಡಬೇಕು ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ-ಪೋಷಕರ
ಸಮಾವೇಶದಲ್ಲಿ ಮಾತಾಡಿದರು. ಪಠ್ಯದ ಜತೆಗೆ ಅನೇಕ ಪಠ್ಯೇತರ ಚಟುವಟಿಕೆಗಳು ಕಾಲೇಜಿನಲ್ಲಿ ನಡೆಯುತ್ತಿದ್ದು ಅದರಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದರು. ಕಾಲೇಜಿನ ಆಗುಹೋಗುಗಳ ಬಗ್ಗೆ ಮತ್ತು ಸವಲತ್ತುಗಳ ಬಗ್ಗೆ ಪೋಷಕರು ಕಾಲಕಾಲಕ್ಕೆ ಹಿಮ್ಮಾಹಿತಿಯನ್ನು ನೀಡಿದರೆ ಇನ್ನೂ ಹೆಚ್ಚಿನ ಸೌಕರ್ಯವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಕಾಲೇಜು ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕೆ ಚಟುವಟಿಕೆಗಳಿಗೆ ಸಮಾನ ಪ್ರೋತ್ಸಾಹವನ್ನು ನೀಡುತ್ತದೆ ಎಂದರು. ವಿದ್ಯಾರ್ಥಿಗಳನ್ನು ಸಮಾಜದ ಪ್ರಜ್ಞಾವಂತ ನಾಗರಿಕರನ್ನಾಗಿಸುವ ನಿಟ್ಟಿನಲ್ಲಿ ನೈತಿಕ ಮೌಲ್ಯಗಳ ಬಗ್ಗೆಯೂ ತಿಳುವಳಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.
ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಮಹೇಶ್.ಕೆ.ಕೆ ಮಾತನಾಡಿ ಸೆಮಿಸ್ಟರ್ ಪದ್ದತಿ, ಆಂತರಿಕ ಪರೀಕ್ಷೆಗಳು ಮತ್ತು ಕಾಲೇಜಿನಲ್ಲಿ ಮೊಬೈಲ್ ಬಳಕೆಗಿರುವ ನಿರ್ಬಂಧಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ಸುಬ್ರಮಣ್ಯ ಭಟ್.ಟಿ.ಎಸ್, ಮಲ್ಲಿಕಾ ಪ್ರಸಾದ್, ಕ್ಯಾಂಪಸ್ ನಿರ್ದೇಶಕ ಪ್ರೊ.ವಿವೇಕ್ ರಂಜನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆಯನ್ನು ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಆಡಳಿತ ಮಂಡಳಿ, ಉಪನ್ಯಾಸಕರು ಮತ್ತು ಪೋಷಕರೊಂದಿಗೆ ಸಂವಾದ ಕಾರ್ಯಕ್ರಮವೂ ಈ ಸಂದರ್ಭದಲ್ಲಿ ನಡೆಯಿತು.
ಸಹಾಯಕ ಪ್ರಾಧ್ಯಾಪಕರುಗಳಾದ ರಮಾನಂದ ಕಾಮತ್ ಸ್ವಾಗತಿಸಿ, ತೇಜಸ್ವಿನಿ.ಎಲ್.ಪಿ ವಂದಿಸಿದರು. ಶ್ವೇತಾಂಬಿಕಾ ಕಾರ್ಯಕ್ರಮ ನಿರ್ವಹಿಸಿದರು.