ಲಾರಿ ಮತ್ತು ದ್ವಿಚಕ್ರ ವಾಹನ ಅಪಘಾತ : ಸವಾರ ಸ್ಥಳದಲ್ಲೇ ಸಾವು…

ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿರೋಡಿನ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಜೂ. 30ರಂದು ನಡೆದಿದೆ.
ಸ್ಕೂಟರ್ ಸವಾರ ಚಿದಾನಂದ ಅವರು ಬಿ.ಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಕ್ರಾಸ್ ಮಾಡುವ ವೇಳೆ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿದ್ದಾರೆ. ಇವರಿಗೆ ಒಂದು ಹೆಣ್ಣು ಮತ್ತು ಗಂಡು ಮಗುವಿದೆ. ಪತ್ನಿ ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಿ ಸಿ ರೋಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.