ಸಂಪಾಜೆ ಗ್ರಾಮ ಪಂಚಾಯತ್- ಅರೋಗ್ಯ ತಪಾಸಣಾ ಶಿಬಿರ…

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಸುಳ್ಯ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅರೋಗ್ಯ ತಪಾಸಣಾ ಶಿಬಿರ ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಅದ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು.
ವೇದಿಕೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಇದರ ವೈದರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಸದಸ್ಯರುಗಳಾದ ವಿಜಯ ಕುಮಾರ್, ವಿಮಲಾ ಪ್ರಸಾದ್ ಉಪಸ್ತಿತರಿದ್ದರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಅರೋಗ್ಯ ಇಲಾಖೆಯ ಹರ್ಷಿತಾ ಕುಮಾರಿ, ಚೈತ್ರಾ ಬಾಗಿರಥಿ, ಪುಷ್ಪಲತಾ. ಆಶಾ ಕಾರ್ಯಕರ್ತೆಯರಾದ, ಮೋಹನಾಗಿ, ಆಶಾ ವಿನಯ್, ಸೌಮ್ಯ, ಪ್ರೇಮಲತಾ ವೈದ್ಯಾಧಿಕಾರಿಗಳು ಹಾಜರಿದ್ದರು ಬಿಪಿ ಶುಗರ್, ಕಣ್ಣಿನ ದೃಷ್ಟಿ ಸಾಮರ್ಥ್ಯ ಬಗ್ಗೆ ಟೆಸ್ಟ್. ಇಸಿಜಿ ಟೆಸ್ಟ್, ಇನ್ನಿತರ ಟೆಸ್ಟ್ ನಡೆಯಿತು. ತಪಾಸಣಾ ಶಿಬಿರದಲ್ಲಿ ನೂರಾರು ಜನ ಭಾಗವಹಿಸಿದ್ದರು.