ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದಿಂದ ಧಾರ್ಮಿಕ ಪುಸ್ತಕಗಳ ಕೊಡುಗೆ…

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ವತಿಯಿಂದ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಗ್ರಂಥಾಲಯಕ್ಕೆ ಸದಸ್ಯರಿಂದ ಸಂಗ್ರಹಿಸಿದ ಪುಸ್ತಕಗಳನ್ನು ಅರ್ಪಿಸುವ ಕಾರ್ಯಕ್ರಮವು ದೇವಳದ ಆಡಳಿತ ಕಚೇರಿಯಲ್ಲಿ ಜರಗಿತು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಪುಸ್ತಕಗಳನ್ನು ಸ್ವೀಕರಿಸಿ ಹಿರಿಯರ ಸೇವಾ ಪ್ರತಿಷ್ಠಾನವು ಜ್ಞಾನಪ್ರಸಾರದ ಕಾರ್ಯದಲ್ಲಿ ಕೈಜೋಡಿಸಿರುವುದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.
ಪುತ್ತೂರು ಘಟಕದ ಕೇಂದ್ರ ಸಮಿತಿ ಪ್ರತಿನಿಧಿ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಕೇಂದ್ರ ಸಮಿತಿಯ ಅಧ್ಯಕ್ಷರಾದ ಕಯ್ಯೂರು ನಾರಾಯಣ ಭಟ್, ಪುತ್ತೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಆಳ್ವ ಪಡುಮಲೆ, ಜಿಲ್ಲಾ ಸಂಚಾಲಕ ಭಾಸ್ಕರ ಬಾರ್ಯ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಪ್ರತಿಷ್ಠಾನದ ಟ್ರಸ್ಟಿಗಳಾದ ಲೋಕೇಶ್ ಹೆಗ್ಡೆ ಪುತ್ತೂರು, ಪ್ರೊ. ವೇದವ್ಯಾಸ ರಾಮಕುಂಜ, ಪುತ್ತೂರು ಘಟಕದ ಪದಾಧಿಕಾರಿಗಳಾದ ಭವಾನಿ ಶಂಕರ ಶೆಟ್ಟಿ ಪುತ್ತೂರು,ಪದ್ಮನಾಭ ನಾಯಕ್, ಗುಂಡ್ಯಡ್ಕ ಈಶ್ವರ ಭಟ್, ಸದಾಶಿವ ರೈ,ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ವತ್ಸಲಾ ರಾಜ್ನಿ, ಶಂಕರಿ ಶರ್ಮ, ಚಂಚಲಾಕ್ಷಿ. ಎಸ್, ಪ್ರೇಮಲತಾ ರಾವ್ ಬೊಳುವಾರು ಉಪಸ್ಥಿತರಿದ್ದರು.

Sponsors

Related Articles

Back to top button