ಫರಂಗಿಪೇಟೆ- ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ…

ಬಂಟ್ವಾಳ :ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ ಅವರಿಗೆ ಶಾಲು ಹೊದಿಸಿ ಫಲಾಪುಷ್ಪ ನೀಡಿ ಗೌರವಿಸಲಾಯಿತು.

ಶ್ರೀಗಳ ಭೇಟಿಯ ಉದ್ದೇಶ:
ಸತತ 2ವರುಷಗಳಿದ 108 ದಿನ108 ಮಠ ಮಂದಿರದಂತಹ ಪುಣ್ಯ ಕ್ಷೇತ್ರಗಳಿಗೆ ಭೇಟಿಕೊಟ್ಟು ಸನಾತನ ಧರ್ಮ ಭೂಮಿಯ ರಕ್ಷಣೆ, ಯೋಧರು ಅವರ ಕುಟುಂಬ ರಕ್ಷಣೆ, ಹಿಂದೂಗಳ ಒಗ್ಗಟ್ಟು, ಹಾಗೂ ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿಯಲ್ಲಿ ಶೀಘ್ರದಲ್ಲಿ ಭವ್ಯ ಮಂದಿರದ ನಿರ್ಮಾಣದ ಸಂಕಲ್ಪ ಹೊತ್ತು ಅವರು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ಪ್ರಸ್ತುತ ಅವರು ಮಥುರಾ ಮುಕ್ತಿ ನ್ಯಾಸ ಸಮಿತಿಯ ಕರ್ನಾಟಕದ ರಾಜ್ಯದ ಅಧ್ಯಕ್ಷರಾಗಿ, ಅಖಿಲ ಭಾರತ ಸಂತ ಸಮಿತಿಯ ಕರ್ನಾಟದ ಸಂಯೋಜಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ಗಾಂಭೀರ, ಪ್ರ ಕಾರ್ಯದರ್ಶಿ ಕರುಣಾಕರ ಕೊಟ್ಟಾರಿ,ಪ್ರತಿಷ್ಠಾ ವರ್ದಂತಿ ಉತ್ಸವ ಸಮಿತಿ ಅಧ್ಯಕ್ಷ ಧನರಾಜ್ ಶೆಟ್ಟಿ ತೇವು, ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Back to top button