ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಯಾಗಿಸಿ-ಬಿ.ಅಬ್ದುಲ್ ಸಲಾಂ…

ಬಂಟ್ವಾಳ: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಎಂಬ ನಾಲ್ಕು ಮುಖ್ಯ ಆಧಾರ ಸ್ಥಂಭಗಳು ಅನ್ಯೋನ್ಯವಾಗಿದ್ದಾಗ ಸಂಸ್ಥೆಯ ವಿದ್ಯಾರ್ಥಿಗಳು ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಕೇವಲ ಅಂಕೆಗಳನ್ನು ಪಡೆಯುವುದನ್ನು ಉದ್ದೇಶವಾಗಿರಿಸದೆ, ಪಾಠೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ಸಲಾಂ ಹೇಳಿದರು.
ಅವರು ತುಂಬೆ ವಿದ್ಯಾ ಸಂಸ್ಥೆಗಳ ರಕ್ಷಕ-ಶಿಕ್ಷಕ ಸಂಘದ ಮಹಾ ಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಿಸಿ ಮಾತನಾಡಿದರು.
ಪಿಟಿಎಯ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ದೇವಸ್ಯ ಮಾತನಾಡಿ ತುಂಬೆ ವಿದ್ಯಾ ಸಂಸ್ಥೆಯು ಕಳೆದ ಮೂರ್ನಾಲ್ಕು ದಶಕಗಳಿಂದ ಬಹಳ ಉತ್ತಮವಾದ ವಿದ್ಯಾರ್ಥಿಗಳನ್ನು ರೂಪಿಸಿ ನಾಗರಿಕರನ್ನಾಗಿ ಮಾಡುವಲ್ಲಿ ಯಶಸ್ಸನ್ನು ಕಂಡಿದೆ ಎಂದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ಮಾತನಾಡಿದರು.
ಪ್ರಾಂಶುಪಾಲರಾದ ವಿ.ಎಸ್.ಭಟ್ ಪ್ರಸ್ತಾವನೆ ಗೈದರು.ಎಂ.ಇ.ಟಿ.ಮ್ಯಾನೇಜರ್ ಬಿ. ಅಬ್ದುಲ್ ಕಬೀರ್ ವಿಚಾರ ಮಂಡಿಸಿದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಆಡಳಿತಾಧಿಕಾರಿ ಕಿಶೋರ್ ಸುವರ್ಣ,
ಪಿಟಿಎ ಉಪಾಧ್ಯಕ್ಷೆ ಮೋಹಿನಿ ಎಂ.ಸುವರ್ಣ, ಮ್ಯಾಕ್ಸಿಂ ಕುವೆಲ್ಲೋ,ಚಂಚಲಾಕ್ಷಿಉಪಸ್ಥಿತರಿದ್ದರು.ವಿದ್ಯಾ ಕೆ. ಸ್ವಾಗತಿಸಿ, ಮಲ್ಲಿಕಾ ಶೆಟ್ಟಿ ವಂದಿಸಿದರು. ವಿಮಲಾ ನಿರೂಪಿಸಿದರು.

Related Articles

Back to top button