ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಸನ್ಮಾನ…

ಸುಳ್ಯ: ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣನವರು ಜು.26 ರಂದು ಅರಂತೋಡು ಟಿ.ಎಂ ಶಹೀದ್ ತೆಕ್ಕಿಲ್ ರವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಅವರನ್ನು ಅರಂತೋಡು ತೆಕ್ಕಿಲ್ ಗ್ರಾಮೀಣಾವೃದ್ಧಿ ಪ್ರತಿಷ್ಠಾನದ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಶಾಲು ಹೊದಿಸಿ, ಹಾರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮತೇಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ನಾಪೊಕ್ಲು, ಕಾಂಗ್ರೆಸ್ ಮುಖಂಡರಾದ ರಮಾನಾಥ್ ಬೇಕಲ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿಮೇಲು, ಉಪಾಧ್ಯಕ್ಷ ಎಸ್.ಕೆ ಹನೀಫ್, ಸಂಪಾಜೆ ಗ್ರಾ. ಪಂ. ಮಾಜಿ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಸಂಪಾಜೆ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರಿ ಮುಂಡಡ್ಕ, ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಕೊಲ್ಯದ ಗಿರೀಶ್, ನೆರವಂಡ ಉಮೇಶ್,ಸಾಮಾಜಿಕ ಜಾಲತಾಣದ ಜಿಲ್ಲಾ ಅಧ್ಯಕ್ಷರಾದ ಸೂರಜ್ ಹೊಸೂರು, ಪೆರಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಸುರೇಶ್ ಪೆರುಮುಂಡ, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ರಾಜೇಶ್ವರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮೊಯಿದೀನ್ ಕೊಯನಾಡು, ಪಿ.ಎಲ್. ಸುರೇಶ್, ಸುಳ್ಯ ನಗರ ಪಂಚಾಯತ್ ಸದಸ್ಯ ಸಿದ್ದೀಕ್ ಕೊಕ್ಕೊ, ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ವಿಜಯ ಆಲಡ್ಕ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ತಾಜುದ್ಧೀನ್ ಅರಂತೋಡು, ಜುಬೈರ್, ಎಸ್.ಎಂ ಮಜೀದ್, ಅಬೂಬಕ್ಕರ್ ಪೆರಾಜೆ, ಉನೈಸ್ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.