ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು- ಆ. 9 ರಂದು ಪದವಿ ಪ್ರದಾನ ಕಾರ್ಯಕ್ರಮ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆ. 9 ರಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ.
2024-25ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಇಲ್ಲಿ ಪದವಿ ಪ್ರದಾನ ಮಾಡಲಾಗುತ್ತದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರ‍್ಯಾಂಕ್ ಗಳಿಸಿಕೊಂಡಿರುವ ಸುಚಿತಾ, ಪ್ರಜ್ಞಾಶಂಕರಿ, ಸಿಂಚನಲಕ್ಷ್ಮಿ, ಶ್ರೀಲಕ್ಷ್ಮಿ.ವಿ, ರವಿನಾರಾಯಣ.ಕೆ.ಎಸ್, ರಾಹುಲ್.ಕೆ, ಲಿಖಿತ.ಕೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ.
ಅಂದು ಬೆಳಿಗ್ಗೆ 10 ಗಂಟೆಗೆ ಈ ಸಮಾರಂಭವು ನಡೆಯಲಿದ್ದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಹಾಗೂ ನಿರ್ದೇಶಕ ಬಲರಾಮ ಆಚಾರ್ಯ.ಜಿ ವಿಶೇಷ ಆಹ್ವಾನಿತರಾಗಿ ಆಗಮಿಸುತ್ತಾರೆ. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ. ತಿಳಿಸಿದ್ದಾರೆ.