ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜುನಲ್ಲಿ ವಾರ್ಷಿಕ ಕ್ರೀಡಾಕೂಟ….

ಕಲ್ಲಡ್ಕ : ಜೀವನದಲ್ಲಿ ಗೆಲುವು ಸಂತೋಷವನ್ನು ನೀಡಿದರೆ, ಸೋಲು ಧೈರ್ಯದಿಂದ ಮುನ್ನಡೆಯಲು ಹೇಳಿಕೊಡುತ್ತದೆ. ಇಂದಿನ ಯುವ ಸಮೂಹಕ್ಕೆ ಶಾರೀರಿಕ ದೃಢತೆ ಅವಶ್ಯಕವಾಗಿದ್ದು, ಬಲವಾದ ದೇಶವನ್ನು ನಿರ್ಮಿಸಲು ಸಹಕಾರಿ. ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡಾ ಮನೋಭಾವವು ಅವಶ್ಯವಾಗಿದೆ ಎಂದು ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ವೆಂಕಟೇಶ್ವರ ಭಟ್ ಮುಳ್ಳುಂಜ ಹೇಳಿದರು.
ಅವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2019-20ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಡಾ.ಪ್ರಭಾಕರ್ ಭಟ್, ಕಲ್ಲಡ್ಕ ಅಧ್ಯಕ್ಷರು ವಿವೇಕಾನಂದ ವಿದ್ಯಾವರ್ಧಕ ಸಂಘ, ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಗಳಾದ ಸತೀಶ್ ಭಟ್, ಶಿವಗಿರಿ, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್, ವಿದ್ಯಾಭಾರತಿ ಕರ್ನಾಟಕ ಇದರ ಕಾರ್ಯದರ್ಶಿಗಳಾದ ಲೋಕಯ್ಯ ಡಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಕಾಲೇಜಿನ ಕ್ರೀಡಾ ಕಾರ್ಯದರ್ಶಿಯಾದ ಕು. ಕೌಶಿಕ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಸ್ವಾಗತಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಿಂಚನ ವಂದಿಸಿದರು. ಗಣಕಶಾಸ್ತ್ರ ಉಪನ್ಯಾಸಕಿಯಾದ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

IMG 20191115 WA0007 300x193

Related Articles

Leave a Reply

Your email address will not be published. Required fields are marked *