ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ…

ಸುಳ್ಯ: ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ಇವರಿಂದ ಧ್ವಜಾರೋಹಣವನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ, ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡುವಲ್ಲಿ ನೂರಾರು ಮಹಾನ್ ವ್ಯಕ್ತಿಗಳು ಬ್ರಿಟೀಷರ ವಿರುದ್ದ ಹೋರಾಡಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ಆ ತ್ಯಾಗ-ಬಲಿದಾನದ ಸ್ವಾತಂತ್ರ್ಯವನ್ನು ನಾವೆಲ್ಲರೂ ಇಂದು ಉಳಿಸಿ-ಬೆಳೆಸಿಕೊಂಡು ಒಗ್ಗಟ್ಟಿನಿಂದ ಈ ದೇಶದ ಶ್ರೇಷ್ಠ ಪ್ರಜೆಗಳಾಗಿ ಶಾಂತಿಯುತವಾಗಿ ಬದುಕಬೇಕು ಎಂದು ಹೇಳಿದರು.
ನಂತರ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ದೇಶ ಭಕ್ತಿಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಶಿಕ್ಷಕ -ರಕ್ಷಕ ಸಂಘದ ಸದಸ್ಯರಾದ ಖಾದರ್ ಮೊಟ್ವೆಂಗಾರ್, ಮುಖ್ಯ ಶಿಕ್ಷಕರಾದ ಸಂಪತ್ ಜೆ ಡಿ, ಶಿಕ್ಷಕ ವೃಂದದವರಾದ ಸಾಧಿಕ ಎ ಕೆ ಆಯಿಷತ್ ಸಬೀರಾ, ಆಯಿಷತ್ ನುಸೈಭಾ, ಆಯಿಷತ್ ಸುನೈನಾ, ಸೋನಿಯಾ, ಆಯಿಷತ್ ನೌಫಿಯಾ, ಕೈರುನ್ನೀಸ, ಅರ್ಪಾನ, ಆಯಿಷತ್ ಬುಶ್ರಾ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.