ಕಡಬ ಪಟ್ಟಣ ಪಂಚಾಯತ್ ಚುನಾವಣೆ ಕಾಂಗ್ರೆಸ್ ಜಯಭೇರಿ – ಸುಳ್ಯದಲ್ಲಿ ಸಂಭ್ರಮಾಚರಣೆ…

ಕಡಬ: ಕಡಬ ಪಟ್ಟಣ ಪಂಚಾಯತ್ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದ ಹಿನ್ನೆಲೆಯಲ್ಲಿ ಸುಳ್ಯದ ಕಾಂಗ್ರೆಸ್ ಮುಖಂಡರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ದ. ಕ ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಅಂಬೇಕಲ್ಲು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ ಕೆ ಹಮೀದ್, ಎನ್ ಎಸ್ ಯು ಐ ಅಧ್ಯಕ್ಷ ಧನುಷ್ ಕುಕ್ಕೇಟಿ, ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತ, ಷರೀಫ್ ಕಂಠಿ, ರಾಜು ಪಂಡಿತ್, ಕಾಯರ್ತೋಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಜತ್ತಪ್ಪ ರೈ, ಎಸ್ ಸಿ ಘಟಕ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಅಬ್ಬಾಸ್ ಅಡ್ಕ, ಆರ್ ಕೆ ಮೊಹಮ್ಮದ್, ರಕ್ಷಿತ್ ದೊಡ್ಡಡ್ಕ, ಮಂಜುನಾಥ್ ಮಡ್ತಿಲ, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಹನೀಫ್, ಕೇಶವ ಮೊರಂಗಲ್ಲು, ಕೊರಗಪ್ಪ ಕೊಯಿಲ, ಗಂಗಾಧರ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.