ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೈಷ್ಣವಿ ಎಸ್ ಕುಲಾಲ್ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ…

ಬಂಟ್ವಾಳ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೈಷ್ಣವಿ ಎಸ್ ಕುಲಾಲ್ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿರುತ್ತಾರೆ.
ಇವರು ವಿದುಷಿ ಶ್ರೀಮತಿ ವಿದ್ಯಾ ಮನೋಜ್ ಕಲಾನಿಕೇತನ ಕಲ್ಲಡ್ಕ ಇವರ ಶಿಷ್ಯೆ.
ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ವಿದ್ಯಾಗಿರಿ ಬಂಟ್ವಾಳ ಇಲ್ಲಿನ ಏಳನೇ ತರಗತಿ ವಿದ್ಯಾರ್ಥಿನಿಯಾಗಿರುವ ವೈಷ್ಣವಿ, ಸುಷ್ಮಾ ಸದಾಶಿವ ಕುಲಾಲ್ ಇವರ ಪುತ್ರಿ.