ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿ – ಶಾಸಕ ಸಂಜೀವ ಮಠಂದೂರು ಚಾಲನೆ….
ಪುತ್ತೂರು: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಸೋಮವಾರ ಕೆಮ್ಮಾಯಿಯಲ್ಲಿ ಶಾಸಕ ಸಂಜೀವ ಮಠಂದೂರು ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು.
ಈ ರಸ್ತೆಯಲ್ಲಿ ಪುತ್ತೂರಿನಿಂದ ಕೆಮ್ಮಾಯಿ ತನಕ ಚತುಷ್ಪಥ ರಸ್ತೆ ನಿರ್ಮಾಣ ಪೂರ್ಣಗೊಂಡಿದ್ದು, ಮುಂದಿನ ಹಂತದಲ್ಲಿ ಮಠಂತಬೆಟ್ಟು ಕೆಮ್ಮಾಯಿಯಿಂದ ಶಾಂತಿನಗರದ ತನಕ ರೂ. 12 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿಪಂ. ಸದಸ್ಯೆ ಶಯನಾ ಜಯಾನಂದ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಸಭಾ ಸದಸ್ಯರಾದ ಜೀವಂಧರ್ ಜೈನ್, ಸುಂದರ ಪೂಜಾರಿ ಬಡಾವು, ಗೌರಿ ಬನ್ನೂರು, ಬಾಮಿ ಅಶೋಕ್ ಶೆಣೈ, ಪ್ರೇಮಲತಾ, ತಾಪಂ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಬನ್ನೂರು ಗ್ರಾಪಂ ಅಧ್ಯಕ್ಷೆ ಸುಜಾತ ಗಾಣಿಗ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.