ತಲಪಾಡಿಯಲ್ಲಿ ನಿಯಂತ್ರಣ ತಪ್ಪಿದ ಬಸ್ ಅಪಘಾತ- ಐವರು ಮೃತ್ಯು…

ಮಂಗಳೂರು: ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್, ಬ್ರೇಕ್ ವಿಫಲವಾಗಿ ನಿಯಂತ್ರಣ ತಪ್ಪಿ ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ.
ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದ ಮೂರು ಮಹಿಳೆಯರು, ಒಬ್ಬ ಪುರುಷ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ.ಜೊತೆಗೆ ಒಂದು ಮಗು ಸಹ ದುರಂತದಲ್ಲಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಶೆಲ್ಟರ್ ಹತ್ತಿರ ನಿಲ್ಲಿಸಿದ್ದ ಆಟೋ ರಿಕ್ಷಾದಲ್ಲಿದ್ದವರೂ ಸಹ ಅಪಘಾತಕ್ಕೆ ಒಳಗಾಗಿದ್ದಾರೆ.
ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.