ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – “ಅರ್ಮಾಧಂ-2025” ಓಣಂ ಆಚರಣೆ…

ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು, ಇದು ಎಲ್ಲರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ಸೆ.9 ರಂದು ನಡೆದ ಅರ್ಮಾಧಂ-2025 ಓಣಂ ಆಚರಣೆಯಲ್ಲಿ ಮಾತನಾಡಿದರು.
ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ಎಲ್ಲೇ ಹೋದರು ನಮ್ಮ ಮಾತೃಭೂಮಿಯ ಸಾಂಪ್ರದಾಯಗಳನ್ನು ಮತ್ತು ಆಚರಣೆಗಳನ್ನು ಮರೆಯಬಾರದು. ನಮ್ಮ ನೆಲ, ಜಲದ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದವರು ಹೇಳಿದರು.
ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು.
ಓಣಂ ಹಬ್ಬದ ಹಿನ್ನೆಲೆಯಲ್ಲಿ ಬೃಹತ್ ಪೂಕಳಂನ್ನು ನಿರ್ಮಿಸಲಾಗಿತ್ತು. ಈ ಹಬ್ಬದ ಹಿನ್ನೆಲೆಯನ್ನು ವಿದ್ಯಾರ್ಥಿಗಳು ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯ ತಿರುವತ್ತಿರ ಕಳಿಯನ್ನು ವಿದ್ಯಾರ್ಥಿನಿಯರು ಅಭಿನಯಿಸಿದರು. ನಂತದ ಚೆಂಡೆ ಮೇಳ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಎಲ್ಲಾ ವಿಭಾಗ ಮುಖ್ಯಸ್ಥರಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

whatsapp image 2025 09 09 at 3.21.24 pm

onam 2025 (2)

onam 2025 (1)

onam 2025 (3)

 

whatsapp image 2025 09 09 at 9.12.15 pm

whatsapp image 2025 09 09 at 9.12.15 pm (1)

Related Articles

Back to top button