ಅರಂತೋಡು-ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ…
ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ...
ಸುಳ್ಯ: ಸುಳ್ಯ ತಾಲೂಕಿನ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಪಂದ್ಯಾಟ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ನಡೆಯಿತು.
ಪಂದ್ಯಾಟವನ್ನು ಅರಂತೋಡು -ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಗಿಡಕ್ಕೆ ನೀರು ಹಾಕಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಮಾರಿ ಸುಶ್ಮಿತಾ.ಎಂ.ಎ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಮತ್ತು ನಿವೃತ್ತ ದೈಹಿಕ ಶಿಕ್ಷಕ ವಸಂತ್ ಎ.ಸಿ.ವಹಿಸಿದ್ದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕ ಮತ್ತು ನಿವೃತ್ತ ಉಪನ್ಯಾಸಕ ಅಬ್ದುಲ್.ಎ , ಶಾಲಾ ಮುಖ್ಯೋಪಾಧ್ಯಾಯ ಸೋಮಶೇಖರ ಪಿ. ಉಪಸ್ಥಿತರಿದ್ದರು.
ಪ್ರಭಾರ ಪ್ರಾಂಶುಪಾಲರಾದ ಸುರೇಶ್ ವಾಗ್ಲೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕಿ ಶ್ರೀಮತಿ ಶಾಂತಿ ಎ.ಕೆ ಮತ್ತು ದೈಹಿಕ ಶಿಕ್ಷಕರಾದ ಶ್ರೀ ಜಯರಾಮ ಪೆರುಮುಂಡ ಸಹಕರಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪದ್ಮಕುಮಾರ್ ವಂದಿಸಿದರು. ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.





