ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿ-ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪೂಜೆಯ ಪೂರ್ವಭಾವಿ ಸಿದ್ಧತಾ ಸಭೆ…

ಬಂಟ್ವಾಳ:ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪ ಮುನ್ನೂರು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆಯಲ್ಲಿ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯ ಶಂಕರ ಬಾಶ್ರೀತಾಯ ಕಾರ್ಯಕ್ರಮದ ರೂಪುರೇಷೆ ನೀಡಿದರು. ಸಮಿತಿ ಸದಸ್ಯರಾದ ಎನ್ ಕೆ ಶಿವ, ಹರಿಪ್ರಸಾದ್ ಭಂಡಾರಿ, ರಾಜು ಪೂಜಾರಿ, ಅರ್ಚಕ ಕೃಷ್ಣ ಭಟ್, ಸುಮಂತ್, ಧನಂಜಯ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷ ದೀಕ್ಷಿತ್ ಶೆಟ್ಟಿ ಮೊದಲಾದವರು ಸೂಕ್ತ ಸಲಹೆ ಸೂಚನೆ ನೀಡಿದರು.
ಯಕ್ಷಗಾನ ತಾಳ ಮದ್ದಳೆ, ಭಜನಾ ಕಾರ್ಯಕ್ರಮ, ಯಕ್ಷಗಾನ ಬಯಲಾಟ, ನಾಟಕ ಅನ್ನದಾನದೊಂದಿಗೆ ಆಶ್ಲೇಷ ಬಲಿ ಪೂಜೆ, ವಿವಿಧ ಕಾರ್ಯಕ್ರಮ, ದೇವರ ಬಲಿ, ಉತ್ಸವ, ರಂಗ ಪೂಜೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಯಿತು.