ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಯಕರ್ತರು ತಮ್ಮನ್ನು ತೊಡಗಿಸಿಕೊಳ್ಳಬೇಕು- ರಾಜೇಶ್ ನಾಯ್ಕ್…

ಬಂಟ್ವಾಳ ಸೆ.16: ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರು ಸಕ್ರೀಯವಾಗಿರಬೇಕು. ಭಾ.ಜ.ಪಾ. ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ತತ್ವ ಸಿದ್ದಾಂತದ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸಕ್ರೀಯವಾಗಿದೆ. 20ಕೋಟಿಗಿಂತಲೂ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿಯು ಜಗತ್ತಿನ ಅತೀ ದೊಡ್ಡ ಸಂಘಟಿತ ರಾಜಕೀಯ ಪಕ್ಷವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಅವರು ಮಾಣಿ ಮಹಾಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಕ್ತಿ ಕೇಂದ್ರದ ಪ್ರಮುಖ ಹರೀಶ್ ಕುಲಾಲ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಬಂಟ್ವಾಳ ಮಂಡಲ ಕಾರ್ಯದರ್ಶಿ ಸುದರ್ಶನ್ ಬಜ ,ಮಾಣಿ ಶಕ್ತಿಕೇಂದ್ರದ ಅಧ್ಯಕ್ಷ ಅರವಿಂದ ರೈ, ಪ್ರಧಾನ ಕಾರ್ಯದರ್ಶಿ ನಾಗೇಶ ಭಂಡಾರಿ , ಮಹಿಳಾ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯೆ ಭವಾನಿ ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮೀ ಗಟ್ಟಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಪ್ಪ ಪೂಜಾರಿ , ವಿಕಾಸ್ ಪುತ್ತೂರು ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿ ವಿಷಯ ಮಂಡಿಸಿದರು.
ಸಮಾರೋಪ ಸಮಾರಂಭದಲ್ಲಿ ಮಂಗಳೂರು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಶುಭ ಹಾರೈಸಿದರು. ಬಿಜೆಪಿ ನಾಯಕರಾದ ಮಾಧವ ಮಾವೆ , ಮಂಡಲ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ , ಉಪಾಧ್ಯಕ್ಷ ರವೀಶ ಶೆಟ್ಟಿ, ನೇರಳಕಟ್ಟೆ ಸೊಸೈಟಿ ಅಧ್ಯಕ್ಷ ಪುಷ್ಪರಾಜ ಚೌಟ, ಅಭ್ಯಾಸ ವರ್ಗ ಸಂಚಾಲಕ ನಾರಾಯಣ ಶೆಟ್ಟಿ , ಸಹಸಂಚಾಲಕಿ ಸುಶೀಲ ಆನಂದ್ , ಬಿಜೆಪಿ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು , ಮಹಿಳಾ ಪ್ರಮುಖರು ಭಾಗವಹಿಸಿದ್ದರು.

Related Articles

Back to top button