ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಟಿ ಎಂ ಶಾಹಿದ್ ತೆಕ್ಕಿಲ್ ಅಧಿಕಾರ ಸ್ವೀಕಾರ…

ಬೆಂಗಳೂರು: ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಬೆಂಗಳೂರಿನಲ್ಲಿ ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ ಐ ಎ ಎಸ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಂತರ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ (ಮಾಹಿತಿ ತಂತ್ರಜ್ಞಾನ ಉತ್ಪಾದನ ವಲಯ) ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಗುತ್ತಿಗೆದಾರರು ಹಾಗೂ ಉದ್ದಿಮೆದಾರರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಸಿನ್,ರಾಜ್ಯ ಸರಕಾರದ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದರು.