ಸುಳ್ಯ ತಾಲೂಕಿನ ವಿದ್ಯುತ್ ಸಮಸ್ಯೆ ಬಗ್ಗೆ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಮನವಿ…

ಮಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಭೇಟಿಯಾಗಿ ಸುಳ್ಯ ತಾಲೂಕಿನ ಕರೆಂಟ್ ಸಮಸ್ಯೆ ಬಗ್ಗೆ ಗಮನಕ್ಕೆ ತರಲಾಯಿತು.
ಸುಳ್ಯದಲ್ಲಿ ತಕ್ಷಣ ಸಭೆ ಕರೆದು ಚರ್ಚೆ ಮಾಡಿ ಶೀಘ್ರ 110 ವಿದ್ಯುತ್ ವ್ಯವಸ್ಥೆ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದರು. ನಿಯೋಗದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಸುಂದರಿ ಮುಂಡಡ್ಕ ಸದಸ್ಯರಾದ ವಿಮಲಾ ಪ್ರಸಾದ್ ಉಪಸ್ಥಿತರಿದ್ದರು.